( 4 Oct, 2015) ಕದಂಬರು Published By : upscgk.com ಕದಂಬರು ಕರ್ನಾಟಕದಲ್ಲಿ ಮೊದಲು ಹುಟ್ಟು ಹಾಕಿದ ಕನ್ನಡ ಸಾಮ್ರಾಜ್ಯ - ಕದಂಬರು . ಕದಂಬರು ಆಳಿದ್ದ ಕ್ರಿ.ಶ.4 ನೇ ಶತಮಾನದಿಂದ 6 ನೇ ಶತಮಾನದವರೆಗೆ ಕದಂಬರ ರಾಜಧಾನಿ - ಬನವಾಸಿ . ಬನವಾಸಿ ಪ್ರಸ್ತುತ ಈ ಜಿಲ್ಲೆಯಲ್ಲಿದೆ - ಉತ್ತರ ಕನ್ನಡ . ಕದಂಬರ ವಂಶದ ಸ್ಥಾಪಕ ದೊರೆ - ಮಯೂರ ವರ್ಮ . ಕದಂಬರ ಲಾಂಛನ - ಸಿಂಹ . ಕದಂಬರ ಧ್ವಜ - ವಾನರ . ಮಹಾಭಾರತ ಕಾಲದಲ್ಲಿ ಬನವಾಸಿಯನ್ನು ಈ ಹೆಸರಿನಿಂದ ಕರೆಯಲಾಗುತ್ತಿತ್ತು - ವೈಜಯಂತಿ ಅಥವಾ ವನವಾಸಿ . ಟಾಲೆಮಿಯು ತನ್ನ ಕೃತಿ Geography ಯಲ್ಲಿ ಬನವಾಸಿಯನ್ನು ಈ ಹೆಸರಿನಿಂದ ಕರೆದಿದ್ದಾನೆ - ಬೈಜಾಂಟಿಯನ್ . ಕದಂಬರ ಮೂಲ ದೈವಾಂಶ ಸಿದ್ದಾಂತ ನಾಗ ಸಿದ್ದಾಂತ ಜೈನ ಸಿದ್ದಾಂತ ನಂದಾ ಮೂಲ ತಮಿಳು ಮೂಲ ಕನ್ನಡ ಮೂಲ ಕದಂಬರ ಮೂಲ ಪುರುಷ - ಮಯೂರ ವರ್ಮ . ಮಯೂರವರ್ಮನ ತಂದೆಯ ಹೆಸರು - ವೀರಶರ್ಮ . ಮಯೂರವರ್ಮನ ಗುರುವಿನ ಹೆಸರು - ವೀರಶರ್ಮ . ಮಯೂರವರ್ಮನನ್ನ ಅವಮಾನಿಸಿದ ಕಂಚಿಯ ಪಲ್ಲವ ದೊರೆ - ಶಿವಸ್ಕಂದ ವರ್ಮ . ಚಂದ್ರವಳ್ಳಿ ಶಾಸನದ ಕರ್ತೃ - ಮಯೂರವರ್ಮ ಚಂದ್ರವಳ್ಳಿಯ ಬಳಿ ಕೆರೆಯನ್ನು ನಿರ್ಮಿಸಿದ ಕದಂಬ ದೊರೆ - ಮಯೂರವರ್ಮ ಮಯೂರವರ್ಮನ ಸೈನಿಕ ಸಾಧನೆಯನ್ನು ತಿಳಿಸುವ ಶಾಸನ - ಚಂದ್ರವಳ್ಳಿ ಶಾಸನ . ಕರ್ನಾಟಕದ ಪ್ರಥಮ ಚಕ್ರವರ್ತಿ ಎಂಬ ಹೆಗ್ಗಳಿಕೆಗೆ ಪಾತ್ರನಾದ ಅರಸ - ಮಯೂರವರ್ಮ ಮಯೂರವರ್ಮನ ನಂತರ ಕದಂಬ ವಂಶವನ್ನು ಆಳಿದವರು - ಕಂಗವರ್ಮ . ಧರ್ಮರಾಜ , ಧರ್ಮಮಹಾರಾಜ ಎಂಬ ಬಿರುದನ್ನು ಧರಿಸಿದ್ದ ಕದಂಬ ದೊರೆ - ಕಾಕುಸ್ಥವರ್ಮ . ಕನ್ನಡದ ಮೊಟ್ಟ ಮೊದಲ ಶಾಸನ - ಹಲ್ಮಿಡಿ ಶಾಸನ . ಹಲ್ಮಿಡಿ ಶಾಸನದ ಕರ್ತೃ - ಕಾಕುಸ್ಥವರ್ಮ . ತಾಳಗುಂದ ಶಾಸನದ ಕರ್ತೃ - ಕಾಕುಸ್ಥವರ್ಮ . ಕದಂಬರ ರಾಜ್ಯಾಡಳಿತದಲ್ಲಿ ರಾಜನಿಗೆ ಆಡಳಿತದಲ್ಲಿ ಸಹಾಯ ಮಾಡುತ್ತಿದ್ದ ಮಂತ್ರಿಮಂಡಳವನ್ನು ಈ ಹೆಸರಿನಿಂದ ಕರೆಯುವರು - ಪಂಚಪ್ರಧಾನರು . ಪ್ರಧಾನ ಮಂತ್ರಿ - ಪ್ರಧಾನ ಅರಮನೆಯ ವ್ಯವಹಾರಗಳ ಮಂತ್ರಿ - ಮನೆಸೇರ್ಗಡೆ . ವಿದೇಶಾಂಗ ವ್ಯವಹಾರಗಳ ಮಂತ್ರಿ - ತಂತ್ರ ಪಾಲ . ತಾಂಬೂಲ ಪಾರು ಪತ್ಯಗಾರ - ಕ್ರಮುಖ ಪಾಲ . ಮಂತ್ರಿಮಂಡಲದ ಪ್ರಧಾನ ಕಾರ್ಯ ದರ್ಶಿ - ಸಭಾಕಾರ್ಯ ಸಚಿವ . ಕದಂಬರ ಆಡಳಿತದಲ್ಲಿ ಜಿಲ್ಲೆಯ ಮುಖ್ಯಸ್ಥನನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಮನ್ನೇಯ . ಪಟ್ಟಣ್ಣದ ಾಡಳಿತ ನೋಡಿಕೊಳ್ಳುತ್ತಿದ್ದವನು - ಪಟ್ಟಣ್ಣ ಸ್ವಾಮಿ . ಕದಂಬರು ಹೊರೆಗಳ ಮೇಲೆ ವಿಧಿಸುತ್ತಿದ್ದ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಪೇರ್ಜುಂಕ . ವ್ಯಾಪಾರ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಬಿಲ್ ಕೊಡೆ . ಸಾರಿಗೆ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಕಿರುಕುಳ . ಗೆರಿಲ್ಲಾಯುದ್ಧ ತಂತ್ರಕ್ಕೆ ಹೆಸರಾಗಿದ್ದ ದಕ್ಷಿಣ ಭಾರತದ ಮನೆತನ - ಕದಂಬರು . ಕದಂಬರ ಕೂಟ ಯುದ್ದವನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಗೆರಿಲ್ಲಾ . ಕದಂಬರ ಸಮಾಜದಲ್ಲಿದ್ದ ಕುಟುಂಬ ಪದ್ದತಿ - ಮಾತೃ ಪ್ರಧಾನ , ಅವಿಭಕ್ತ ಕುಟುಂಬ ಪದ್ದತಿ . ಕದಂಬ ಸಾಮ್ರಾಜ್ಯವು ಈ ಲಕ್ಷಮಗಳನ್ನು ಹೊಂದಿತ್ತು - ಭಾರತೀಕರಣ . ಕದಂಬರು ಈ ಧರ್ಮದ ಅವಲಂಬಿಗಳು - ವೈದಿಕ ಧರ್ಮ . ಕದಂಬರ ಕುಲದೇವರು - ತಾಳಗುಂದದ ಪ್ರಾಣೇಶ್ವರ . ಕದಂಬರ ಮನೆಯ ದೇವರು - ಬನವಾಸಿಯ ಮಧಕೇಶ್ವರ . ಕದಂಬರ ಕಾಲದಲ್ಲಿ ಬನವಾಸಿಗೆ ಆಗಮಿಸಿದ ಚೀನೀಯಾತ್ರಿಕ - ಹ್ಯೂಯನ್ ತ್ಸಾಂಗ್ . ಕದಂಬರ ಮುಖ್ಯ ವೃತ್ತಿ - ವ್ಯವಸಾಯ . ಕದಂಬರ ಕಾಲದ ಭ ಕಂದಾಯ ಪದ್ದತಿ - ಸರ್ವ ನಮಸ್ಯ , ತ್ರೀಬೋಗ , ಹಾಗೂ ತಾಳವೃತ್ತಿ. ಕದಂಬರ ರೇವು ಪಟ್ಟಣ್ಣಗಳು - ಗೋವಾ , ಮಂಗಳೂರು , ಹೊನ್ನವರ , ಅಂಕೋಲ ಹಾಗೂ ಭಟ್ಕಳ ಕದಂಬರ ವಿಶಿಷ್ಠ ಕೊಡುಗೆಗಳು - ನಾಣ್ಯ ಪದ್ದತಿ . ಕದಂಬರು ಬಿಡುಗಡೆ ಮಾಡಿದ ಬೆಳ್ಳಿ ನಾಣ್ಯದ ಹೆಸರು - ಪದ್ಮಟಂಕ . ಕದಂಬರ ಪ್ರಮುಖ ನಾಣ್ಯಗಳು - ಗದ್ಯಾಣ , ದ್ರುಮ್ಮ , ಪಮ , ಸುವರ್ಣ , ಕದಂಬರ ಕಾಲದ ಶಿಕ್ಷಣ ಪದ್ದತಿ - ಗುರುಕುಲ ಶಿಕ್ಷಮ ಪದ್ದತಿ , “ ಘಟಿಕ ಸಾಹಸಿ ” ಎಂಬ ಬಿರಿದನ್ನು ಪಡೆಯುತ್ತಿದ್ದವರು - ಘಟಕದಲ್ಲಿ ಓದಿದ ವಿಧ್ಯಾರ್ಥಿಗಳಿಗೆ . ಇಲ್ಲಿ ಉಚಿತ ಊಟೋಪಚಾರದ ವ್ಯವಸ್ಥೆ ಇತ್ತು - ಬಳ್ಳಿಗಾಮೆ , ತಾಳಗುಂದ , ಬನವಾಸಿ ಹಾಗೂ ಅಗ್ರಹಾರ . ಕದಂಬರ ಕಾಲದ ಪ್ರಸಿದ್ದ ವಿದ್ಯಾ ಕೇಂದ್ರ - ಕಂಚಿ . ಕದಂಬರ ಆರಂಭದ ಶಾಸನಗಳು ಈ ಭಾಷೆಯಲ್ಲಿದೆ - ಪ್ರಾಕೃತ . ತಾಳಗುಂದ ಶಾಸನದ ಕರ್ತೃ - ಕವಿ ಕುಬ್ಜ ( ಶಾಂತಿ ವರ್ಮ ಬರೆಯಿಸಿದ ) “ ಮದನ ತಿಲಕ ” ಕೃತಿಯ ಕರ್ತೃ - ಚಂದ್ರರಾಜ . ಚಂದ್ರ ಚೂಡಾ ಮಣಿ ಕೃತಿಯ ಕರ್ತೃ - ನಾಗವರ್ಮ . “ ಸುಕುಮಾರ ಚರಿತೆ ” ಯ ಕರ್ತೃ - ಶಾಂತಿನಾಥ “ ಕೌಂತಳೇಶ್ವರ ದೌತ್ಯಂ ” ಕೃತಿಯ ಕರ್ತೃ - ಎರಡನೇ ಕಾಳಿದಾಸ . “ ಕದಂಬ ಶೈಲಿ ” ಎಂಬ ವಾಸ್ತುಶಿಲ್ಪ ಶೈಲಿಯನ್ನು ಸೃಷ್ಠಿಸಿದವರು - ಕದಂಬರು . ಕದಂಬರ ಆರಂಭದ ರಚನೆ - ಮೃಗೇಶ ವರ್ಮನು ರಚಿಸಿದ ಜೈನ ಬಸದಿ . ದಕ್ಷಿಣ ಭಾರತದಲ್ಲಿಯೆ ಮೊಟ್ಟ ಮೊದಲನೆಯ ಪ್ರಾಚೀನ ದೇವಾಲಯಗಳ ಕಲಾಕೃತಿ - ತಾಳಗುಂದದ ಪ್ರಣವೇಶ್ವರ ದೇವಾಲಯ . ಹಲ್ಮಿಡಿ ಶಾಸನ ಈ ಜಿಲ್ಲೆಯಲ್ಲಿ ದೊರೆಯುತ್ತದೆ - ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮ . ಮಯೂರ ವರ್ಮನನ್ನು “ ದ್ವೀಜೋತಮ ” ನೆಂದು ತಿಳಿಸಿರುವ ಶಾಸನದ ಹೆಸರು - ಮಳವಳ್ಳಿ ಶಾಸನ . ಕಂಚಿಯಿಂದ ಹೊರನಡೆದ ಮಯೂರವರ್ಮನು ಮೊದಲು ಶಸ್ತ್ರಸ್ತ್ರ ಪಡೆಯನ್ನು ಕಟ್ಟಿದ ಪ್ರದೇಶ - ಶ್ರೀ ಶೈಲ “ಧರ್ಮ ಮಹಾರಾಜಾಧಿರಾಜ ” ಎಂಬ ಬಿರದ್ದನ್ನು ಹೊಂದಿದ್ದ ಕದಂಬರ ಅರಸ - ಕಂಗವರ್ಮ ಅಥಾವ ಕೊಂಗುಣಿ ವರ್ಮ . ತಾಳಗುಂದ ಶಾಸನ ಈ ಜಿಲ್ಲೆಯಲ್ಲಿ ದೊರಕಿದೆ - ಶಿವಮೊಗ್ಗ . ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಮಾಡಿದ ಕದಂಬ ದೊರೆ - ಕಾಕುಸ್ಥವರ್ಮ . ಮೃಗೇಶನ ಮತ್ತೊಂದು ರಾಜಧಾನಿ - ಹಲಸಿ . ಕದಂಬರ ಪ್ರಾಂತ್ಯದ ಘಟಕಗಳು - ಕಂಪಣ . ಟಂಕ ಹಾಗೂ ಗಧ್ಯಾಣ ಎಂಬ ನಾಣ್ಯಗಳನ್ನು ಚಲಾವಣಿಗೆ ತಂದ ಮೊದಲಿಗರು - ಕದಂಬರು . ಚಂದ್ರವಳ್ಳಿಯ ಶಾಸನ ಈ ಜಿಲ್ಲೆಯಲ್ಲಿ ದೊರೆತಿದೆ - ಚಿತ್ರದುರ್ಗ . ಬ್ರಾಹ್ಮಿಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ . ಮಹಾಭಾರತದಲ್ಲಿ ಬನವಾಸಿಯನ್ನು ಈ ಹೆಸರಿನಿಂದಲೂ ಕರೆದ್ದಿದ್ದಾರೆ - ಕುಂತಲ ದೇಶ . ಪ್ರಣವೇಶ್ವರನ ಹೆಸರಿನಲ್ಲಿ ಕೆರೆಯನ್ನ ಕಟ್ಟಿಸಿದ ದೊರೆ - ಕಾಕುಸ್ಥವರ್ಮ . ಕದಂಬರು ಈ ನದಿಯ ದಡದಲ್ಲಿ ತಮ್ಮ ರಾಜ್ಯವನ್ನ ಸ್ಥಾಪಿಸಿದರು - ವರದಾ ನದಿ . ತಾಳಗುಂದದ ಪ್ರಾಚೀನ ಹೆಸರು - ಸ್ಥಣ ಕುಂದೂರು ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ ಮಯೂರವರ್ಮನು ವಿಧ್ಯಾಭ್ಯಾಸಕ್ಕಾಗಿ ಹೋದ ವಿದ್ಯಾಕೇಂದ್ರ - ಕಂಚಿ ಕದಂಬರ ಈ ದೊರೆಯನ್ನು ಕುಂತಳ ರಾಜ್ಯದ ಏಕಮಾತ್ರ ದೊರೆ ಎಂದು ಹೇಳಲಾಗಿದೆ - ಭಗೀರಥ ವರ್ಮ ಗುಪ್ತರೊಂದಿಗೆ ವೈವೈಹಿಕ ಸಂಬಂಧ ಹೊಂದಿದ್ದ ಕದಂಬ ದೊರೆ - ಕಾಕುಸ್ಥ ವರ್ಮ ಕದಂಬರ ಕೊನೆಯ ದೊರೆ - ಹರಿವರ್ಮ - ಕದಂಬರ ಆಳ್ವಿಕೆಯನ್ನು ಕೊನೆಗಾಣಿಸಿದ ಸಾಮ್ರಾಜ್ಯ - ಬಾದಾಮಿ ಚಾಲುಕ್ಯರು ತಾಳಗುಂದ ಶಾಸನವು ಈ ಅರಸರನ್ನು “ ಆಬರಣ ” ಎಂದು ಬಣ್ಣಿಸಿದೆ - ಕಾಕುಸ್ಥ ವರ್ಮ ಹಲ್ಮಿಡಿ ಶಾಸನದ ಕಾಲ - ಕ್ರ.ಶ.450